Share this news

ಕಾರ್ಕಳ: ಅಭಿವೃದ್ದಿ ಚಟುವಟಿಕೆಗಳು ನಿರಂತರ ಪ್ರಕ್ರಿಯೆಯಾಗಿದೆ‌.ಗ್ರಾಮ ಪಂಚಾಯಿತಿಗಳಲ್ಲಿ ಸುಲಲಿತ ಆಡಳಿತ ನಡೆಯಬೇಕಾದರೆ ಸುಸಜ್ಜಿತ ಕಟ್ಟಡ, ಆಧುನಿಕ ಸೌಲಭ್ಯಗಳುಳ್ಳ ಕಚೇರಿ ಸೇರಿದಂತೆ ಮೂಲಸೌಕರ್ಯಗಳು ಅತ್ಯಾವಶ್ಯಕ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.


ಅವರು ಸೋಮವಾರ ಬೈಲೂರು ಗ್ರಾಮ‌ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಎಲ್ಲಾ ಸೇವೆಗಳನ್ನು ಗ್ರಾಮ‌ ಪಂಚಾಯಿತಿಗಳಲ್ಲಿ ಹಂತಹಂತವಾಗಿ ಜೋಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ತಂಡ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಸಾಧ್ಯ ಎಂದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರದಂತೆ ಗ್ರಾಮ ಪಂಚಾಯತ್ ಗಳು ಗ್ರಾಮ ಸರ್ಕಾರಗಳಾಗಿ ಕೆಲಸ ನಿರ್ವಹಿಸುತ್ತಿವೆ‌. ಆಡಳಿತ ವ್ಯವಸ್ಥೆಯನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಗಳು ಕಾಲಕ್ಕೆತಕ್ಕಂತೆ ನಿಯಮಾವಳಿಗಳನ್ನು ಪರಿಷ್ಕರಿಸುತ್ತವೆ,ಇದರಿಂದ ಜನರಿಗೆ ತ್ವರಿತಗತಿಯಲ್ಲಿ ಯೋಜನೆಗಳು ತಲುಪುವಂತಾಗಲಿದೆ ಎಂದರು.

 

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉದ್ಯಮಿ ಉದಯ ಶೆಟ್ಟಿ ಮುನಿಯಾಲು,ಪಂಚಾಯಿತಿ ಕಟ್ಟಡಕ್ಕೆ ಸ್ಥಳದಾನ ಮಾಡಿದ ಗೀತಾ ಜೆ ಆಳ್ವ,ನಾಯರ್’ಬೆಟ್ಟು ಕೌಡೂರು, ಪ್ರಶಾಂತ್ ಶೆಟ್ಟಿ ಕೌಡೂರು,ನ್ಯಾಯವಾದಿ ಭೋಜ ನಾರಾಯಣ ಪೂಜಾರಿ ,ಬೀದಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಜಿತ್ ಶೆಟ್ಟಿ, ಕೌಡೂರು ಮಾರಿಯಮ್ಮ ದೇವಸ್ಥಾನ ಆಡಳಿತ ಮೊಕ್ತೇಸರ ಕೃಷ್ಣರಾಜ್ ಹೆಗ್ಡೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಿರ್ಮಲಾ ರಾಣೆ, ಮಾಲಿನಿ ಶೆಟ್ಟಿ, ಸಚ್ಚಿದಾನಂದ ಶೆಟ್ಟಿ, ಜಯ ಪೂಜಾರಿ ಬಸ್ರಿಮನೆ, ಮುನಿಯಾಲು ಉದಯಕುಮಾರ್ ಶೆಟ್ಟಿ,ಪ್ರಕಾಶ್ ಶೆಟ್ಟಿ,ಬೆರ್ಮೊಟ್ಟು,ಪಂಚಾಯಿತಿ ಉಪಾಧ್ಯ ಸಂತೋಷ್ ಮುಂತಾದವರು ಹಾಜರಿದ್ದರು.
ಈ ಸಂದರ್ಭದಲ್ಲಿ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದವರನ್ನು,ಸ್ಥಳದಾನ ಮಾಡಿದ ದಾನಿಗಳನ್ನು,ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಅತಿಥಿಗಳನ್ನು ಶಾಲು ಹಾಕಿ ಸ್ವಾಗತಿಸಿದರು.
ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಸುಜಾತ ಸ್ವಾಗತಿಸಿ, ಶ್ರೀವಿದ್ಯಾ ವಂದಿಸಿದರು. ಸಂಗೀತಾ ಕಾರ್ಯಕ್ರಮ ನಿರೂಪಿಸಿದರು‌
ಸಭಾ ಕಾರ್ಯಕ್ರಮದ ಆರಂಭ ಹಾಗೂ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ರಾತ್ರಿ 8 ರಿಂದ ಪುದರ್ ದೀದಾಂಡ್ ತುಳು ಹಾಸ್ಯಮಯ ನಾಟಕ ಪ್ರದರ್ಶನವಾಯಿತು.

Leave a Reply

Your email address will not be published. Required fields are marked *