ಉಡುಪಿ: ಲೋಕಸಭಾ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಲಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆಯಲು ಮೂವರು ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ಏರ್ಪಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಪ್ರಬಲ ಆಕಾಂಕ್ಷಿಯಾಗಿದ್ದರೂ ಗೋ ಬ್ಯಾಕ್ ಶೋಭಾ ಅಭಿಯಾನದ ಲಾಭ ಪಡೆಯಲು ಕಾಂಗ್ರೆಸ್ ಹವಣಿಸುತ್ತಿದ್ದು ಈ ನಿಟ್ಟಿನಲ್ಲಿ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಕೈಪಡೆ ಚಿಂತನೆ ನಡೆಸಿದೆ. ಆದರೆ ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಲೆನೋವಿನ ವಿಚಾರವಾಗಿದೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಖ್ಯಾತ ನ್ಯಾಯವಾದಿ ಕೊಪ್ಪ ತಾಲೂಕಿನ ಸುಧೀರ್ ಮರೋಳಿ ಹಾಗೂ ಅಂಶುಮAತ್ ಗೌಡ ನಡುವೆ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.
ಕರಾವಳಿ ಭಾಗದ ಬಂಟ ಸಮುದಾಯದ ಪ್ರಬಲ ಅಭ್ಯರ್ಥಿಯಾಗಿರುವ ಜಯಪ್ರಕಾಶ್ ಹೆಗ್ಡೆಯವರು ಸಿಎಂ ಸಿದ್ದರಾಮಯ್ಯನವರ ಆಪ್ತರಾಗಿರುವ ಹಿನ್ನಲೆಯಲ್ಲಿ ಅವರನ್ನೇ ಉಡುಪಿ-ಚಿಕ್ಕಜಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಲು ಸಿಎಂ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಜಯಪ್ರಕಾಶ್ ಹೆಗ್ಡೆಯವರನ್ನು ಕಾಂಗ್ರೆಸ್ ಮರುಸೇರ್ಪಡೆ ವಿಚಾರದಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗವಾಗಿಯೇ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇತ್ತ ಒಕ್ಕಲಿಗ ಸಮುದಾಯದ ಚಿಕ್ಕಮಗಳೂರಿನ ಅಂಶುಮAತ್ ಗೌಡ ಹಾಗೂ ನ್ಯಾಯವಾದಿ ವಾಗ್ಮಿ ಸುಧೀರ್ ಕುಮಾರ್ ಮರೋಳಿಯವರ ಹೆಸರುಗಳು ಕೂಡ ಪ್ರಬಲವಾಗಿ ಕೇಳಿ ಬರುತ್ತಿದ್ದು, ಇಬ್ಬರು ಆಕಾಂಕ್ಷಿಗಳ ಬೆಂಬಲಿಗರು ತಮ್ಮ ನಾಯಕರಿಗೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿಯುತ್ತಿದ್ದಾರೆ. ಈ ನಡುವೆ ಅಂಶುಮAತ್ ಗೌಡ ಬೆಂಬಲಿಗರು ಈಗಾಗಲೇ ಕ್ಷೇತ್ರದಾದ್ಯಂತ ಅಂಶುಮAತ್ ಗೌಡ ವಾಟ್ಸಾಪ್ ಗ್ರೂಪ್ ರಚಿಸಿ ಕಾರ್ಯಕರ್ತರನ್ನು ಸೇರಿಸುವ ಮೂಲಕ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದೇರೀತಿ ಪ್ರಖರ ಮಾತುಗಾರ ನ್ಯಾಯವಾದಿ ಸುಧೀರ್ ಮರೋಳಿ ಕೂಡ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಾದ್ಯಂತ ಹಲವಾರು ಹೋರಾಟ ಸಭೆಗಳು ಹಾಗೂ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುವ ಮೂಲಕ ಪರಿಚಿತರಾಗಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ನ್ಯಾಯಾಲಯದ ಕೆಲಸಕಾರ್ಯದ ನಡುವೆಯೂ ಕ್ಷೇತ್ರದಲ್ಲಿ ಓಡಾಟ ನಡೆಸುವ ಮೂಲಕ ತಾನೂ ಕೂಡ ಆಕಾಂಕ್ಷಿ ಎಂದು ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
ಬಿಜೆಪಿಯಲ್ಲಿನ ಗೊಂದಲದ ಲಾಭಗಿಟ್ಟಿಸಿ ಲೋಕಸಭಾ ಸ್ಥಾನವನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಅಂತಿಮಗೊಳಿಸುವುದು ಕೂಡ ಅಷ್ಟೇ ಸವಾಲಿನ ಕೆಲಸವಾಗಿದೆ. ಮೂಲಗಳ ಪ್ರಕಾರ ಜಯಪ್ರಕಾಶ್ ಹೆಗ್ಡೆಯವರನ್ನೇ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದ್ದರೂ, ಪ್ರಬಲ ಆಕಾಂಕ್ಷಿಗಳಾದ ಅಂಶುಮAತ್ ಗೌಡ ಹಾಗೂ ಸುಧೀರ್ ಮರೋಳಿ ಹೆಸರುಗಳು ಕೂಡ ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾದ ಬಳಿಕ ಸ್ಪಷ್ಟ ಉತ್ತರ ಸಿಗಲಿದೆ