Share this news

ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಕನಿಷ್ಟ 400 ಸ್ಥಾನಗಳೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ, ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತವವಾಗಲಿದೆ ಎಂದು ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ್ ಭವಿಷ್ಯ ನುಡಿದಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, ನಿಮ್ಮ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳುವುದು ಖಚಿತ. ಬಳಿಕ ಮತ್ತೆ ರಾಜ್ಯದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ.ಈಗಾಗಲೇ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಪಠ್ಯಗಳನ್ನು ಪಠ್ಯಕ್ರಮದಲ್ಲಿ ಸೇರಿಸಿದ್ದು ಖಂಡನೀಯ,ನಮ್ಮ ಸರ್ಕಾರ ಬಂದ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದು ನಿಶ್ಚಿತ ಎಂದಿದ್ದಾರೆ.

ಇದೇವೇಳೆ ಮಾತನಾಡಿದ ಅವರು,ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಪ್ರಕರಣದ ಕುರಿತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾಸೀರ್ ಹುಸೇನ್‌ಗೆ ಪ್ರಮಾಣ ವಚನ ಬೋಧಿಸಬಾರದು. ಪ್ರಕರಣದ ತನಿಖೆ ಮುಗಿಯುವವರೆಗೂ ಅವರಿಗೆ ಪ್ರಮಾಣ ವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಯತ್ನಾಳ್ ಮನವಿ ಮಾಡಿದರು. ಘೋಷಣೆ ಕೂಗಿದ ವ್ಯಕ್ತಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ನಿಕಟ ಸಂಬಂಧ ಹೊಂದಿದ್ದಾರೆ. ಇದರಲ್ಲಿ ನಾಸೀರ್ ಪಾತ್ರವೂ ಇದ್ದೇ ಇದೆ‌ ಎಂದು ಆರೋಪಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಒಂದು ವ್ಯವಸ್ಥಿತ ಜಾಲವಾಗಿದೆ. ಬಾಂಬ್ ಸ್ಫೋಟಕ್ಕೂ, ಪಾಕಿಸ್ತಾನದ ISI ಗೆ ಸಂಪರ್ಕವಿದೆ. ಸ್ಫೋಟದ ಹಿಂದೆ ಭಾರತವನ್ನು ಇಸ್ಲಾಮಿಕರಣ ಮಾಡುವ ಮಹಾಸಂಚು ಅಡಗಿದೆ. ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟಿಕರಣದಿಂದ ಬಾಂಬರ್‌ಗಳಿಗೆ ಸ್ವಾತಂತ್ರ್ಯ ಸಿಕ್ಕಂತಾಗಿದೆ ಎಂದು ದೂರಿದರು. ನಾನು ಲೋಕಸಭೆಗೆ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ‌ ನಡ್ಡಾ ಅವರಿಗೆ ತಿಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

 

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

 

 

 

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *