ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಜರುವತ್ತು ಎಂಬಲ್ಲಿ ಶುಕ್ರವಾರ ನಡೆದಿದೆ. ಹೆಬ್ರಿ ತಾಲೂಕಿನ ಜರುವತ್ತು ನಿವಾಸಿ ಶಕುಂತಳಾ ಪೂಜಾರಿ(53) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶಕುಂತಳಾ ಎಂಬವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದ್ದು ಈ ಹಿನ್ನಲೆಯಲ್ಲಿ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಪಡೆಯುತ್ತಿದ್ದರೂ ಮಾನಸಿಕ ಖಿನ್ನತೆ ಕಡಿಮೆಯಾಗದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.