ಬೆಂಗಳೂರು : ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸೋಮವಾರ ವೇತನ ಹೆಚ್ಚಳ ಇತರೇ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ ಸಹಾಯಕಿಯರಿಗೆ 6000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನೂ ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು.
ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ ಹೆಚ್ಚಿಸುವಂತೆ ಕೋರಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಮ್ಮಕುಟುಂಬಗಳಿಗೆ, ತಮ್ಮ ಸಮುದಾಯಕ್ಕೆ ಆಗಿರುವ ಅನುಕೂಲಗಳನ್ನು ವಿವರಿಸಿ ಮುಖ್ಯಮಂತ್ರಿಗಳಿಗೆ ಕಾರ್ಯಕರ್ತೆಯರು ಅಭಿನಂದಿಸಿದರು.
ಮನೆ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮನೆ ನಿರ್ವಹಣೆ ಮಾಡುವ ಮಹಿಳೆಯರಿಗೆ ಸಹಾಯವಾಗಿದೆ. ಸರ್ಕಾರ ನಿಮ್ಮ ಪರವಾಗಿದೆ ಎಂದು ಭರವಸೆ ನೀಡಿದರು. ಶೇ 60 ರಷ್ಟು ಅಂಗನವಾಡಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ದೊರೆಯುತ್ತಿದೆ. ಇತರೆ ಬೇಡಿಕೆಗಳ ಬಗ್ಗೆಯೂ ಪರಿಗಣಿಸಲಾಗುವುದು ಎಂದು ಸಿಎಂ ತಿಳಿಸಿದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.






