Share this news

ಬೆಂಗಳೂರು: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಹೇಳಿದರು.

ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ:

ಸುಳ್ಳು ಸುದ್ದಿ ಹರಡುವುದು, ಫೋಟೋ ಮತ್ತು ವಿಡಿಯೋಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಸೈಬರ್ ಕ್ರೈಂ ನಡೆಯುತ್ತಿವೆ. ಇಂತಹ ಪ್ರಕರಣಗಳಿಗೆ ಯಾವ ರೀತಿ ಕ್ರಮ ತೆಗದುಕೊಳ್ಳಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂಮತ್ರಿ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸೈಬರ್ ಕ್ರೈಂ ವಿಷಯಗಳ ಕುರಿತ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಆದೇಶ‌ ಹೊರಡಿಸುತ್ತದೆ ಎಂದು ಇದೇ ವೇಳೆ ಗೃಹ ಸಚಿವರು ತಿಳಿಸಿದರು.
ಮಲ್ಟಿ ಡಿಪಾರ್ಟ್‌ಮೆಂಟ್ ಕೋರ್ಡಿನೇಷನ್ ಕಮಿಟಿಯನ್ನು ರಚಿಸಲಾಗಿದೆ. ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಮುಖ್ಯಸ್ಥರಾಗಿರುತ್ತಾರೆ. ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ನೋಡಲ್ ಅಧಿಕಾರಿಗೆ ಹೆಚ್ಚಿನ ಜವಾಬ್ಧಾರಿಯನ್ನು ವಹಿಸಲಾಗುತ್ತಿದೆ. ಡಿಜಿ ಮತ್ತು ಐಜಿಪಿ ಮೂಲಕ ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗುತ್ತದೆ ಎಂದು ವಿವರಿಸಿದರು‌.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *