ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ.
ಪ್ರಧಾನಿ ನರೇಂದ್ರ ಮೋದಿ ಮಾ 16ರಂದು ರಾಜ್ಯಕ್ಕೆ ಆಗಮಿಸಲಿದ್ದು, ಎರಡು ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.
ಅಂದು ಮಧ್ಯಾಹ್ನ 2 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಲಬುರ್ಗಿಗೆ ಭೇಟಿ ಕೊಡಲಿದ್ದಾರೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ನಂತರ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಮೋದಿಜೀ ಅವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರ್ಗಿ ಎನ್ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಹಲವಾರು ನಾಯಕರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.






