ನವದೆಹಲಿ: ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಕರ್ನಾಟಕದ 20 ಕ್ಷೇತ್ರಗಳು ಸೇರಿದಂತೆ ಒಟ್ಟು 72 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ ನಳಿನ್ ಕುಮಾರ್, ಡಿ.ವಿ ಸದಾನಂದ ಗೌಡ, ಪ್ರತಾಪಸಿಂಹ ಸೇರಿದಂತೆ ಬರೋಬ್ಬರಿ 9 ಜನ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಭಾರೀ ಕುತೂಹಲ ಮೂಡಿಸಿದ ಉಡುಪಿ ಚಿಕಮಗಳೂರು ಕ್ಷೇತ್ರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯವರ ಸ್ಪರ್ಧೆಗೆ ತೀವೃ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇದಲ್ಲದೇ ಮಂಗಳೂರು ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲುಗೆ ಗೇಟ್‌ಪಾಸ್ ನೀಡಿ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಕ್ಷೇತ್ರದಿಂದ ಹಾಲಿ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಟಿಕೆಟ್ ಸಿಕ್ಕಿದೆ. ಇದಲ್ಲದೇ ಮೈಸೂರು ಕ್ಷೇತ್ರದಿಂದ ಯದುವೀರ್ ಅವರಿಗೆ ಟಿಕೆಟ್ ದೊರೆತರೆ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ನಿರಾಸೆಯಾಗಿದೆ. ಇದಲ್ಲದೇ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯದ ಒಟ್ಟು 20 ಕ್ಷೇತ್ರಗಳಿಗೆ ಟಿಕೆಟ್ ಅಂತಿಮವಾಗಿದ್ದು ಉಳಿದ 8 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿ ಇರಿಸಿಕೊಂಡಿದೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.