ಕಾರ್ಕಳ: ಕಾರ್ಕಳ ತಾಲೂಕಿನ ಜೋಡುರಸ್ತೆಯಲ್ಲಿನ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ನವೀಕೃತ ಪ್ರಧಾನ ಕಚೇರಿ ಮತ್ತು ಸಭಾಂಗಣದ ಉದ್ಘಾಟನೆಯು ಮಾ.17ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಪ್ರಧಾನ ಕಚೇರಿ ಹಾಗೂ ಸಭಾಂಗಣವನ್ನು ಉದ್ಘಾಟಿಸಲಿದ್ದು, ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಕೆ. ಶಂಕರನಾರಾಯಣ ಭಟ್ ಆಶೀರ್ವಚನ ನೀಡಲಿದ್ದಾರೆ. ಶ್ರೀದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ
ಮಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ , ಉಡುಪಿ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ, ಲೆಕ್ಕಪರಿಶೋಧಕ ಕೆ. ಕಮಲಾಕ್ಷ ಕಾಮತ್, ಕುಕ್ಕುಂದೂರು ಗ್ರಾ. ಪಂ. ಉಪಾಧ್ಯಕ್ಷ ಉಷಾ ಕೆ. ಉಪಸ್ಥಿತರಿರಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಖ್ಯಾತ ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಭಾಗವಹಿಸಲಿದ್ದು, ಬೆಳಗ್ಗೆ 9.30ಕ್ಕೆ ಕುಮಾರಿ ಹಂಸಿಕಾ ಇವರಿಂದ ಸಾಕ್ರೋಪೋನ್ ವಾದನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ರಾವ್ ತಿಳಿಸಿದ್ದಾರೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.