ಬೆಂಗಳೂರು: ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾಳೆ.
ಶಿವಮೊಗ್ಗ ಮೂಲದ ಮಹಿಳೆ ಈ ಕುರಿತು ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಿಸಿದ್ದು, ತನ್ನ 17 ವರ್ಷದ ಮಗಳ ಮೇಲೆ ಬಿಎಸ್ವೈ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರು ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು ಈ ವಿಚಾರವಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಈ ಮಹಿಳೆ ಕೇವಲ ಬಿಎಸ್ ವೈ ವಿರುದ್ಧ ಮಾತ್ರ ದೂರು ನೀಡಿಲ್ಲ ಜತೆಗೆ ತನ್ನ ಪತಿಯ ವಿರುದ್ಧವೂ ದೂರು ನೀಡಿದ್ದು ಈ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದೆ.ಈ ಪ್ರಕರಣದ ಕುರಿತಂತೆ ಪೊಲೀಸ್ ಅಧಿಕಾರಿಗಳು, ರಾಜಕೀಯ ನಾಯಕರು ಹಾಗೂ ಉದ್ಯಮಿಗ ವಿರುದ್ಧವೂ ದೂರನ್ನು ದಾಖಲಿಸಿದ್ದಾಳೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ ಹೊತ್ತಲ್ಲೇ ಈ ಪ್ರಕರಣವು ರಾಜಕೀಯ ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಗಳು ದಟ್ಟವಾಗಿದ್ದು, ಪೊಲೀಸರು ಈ ಪ್ರಕರಣದ ಸತ್ಯಾಸತ್ಯತೆಯ ಕುರಿತು ತನಿಖೆಗೆ ಮುಂದಾಗಿದ್ದಾರೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.