ನವದೆಹಲಿ: ಲೋಕಸಭಾ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿದ್ದು, ಈ ನಡುವೆ ಕೇಂದ್ರ ಚುನಾವಣಾ ಆಯೋಗವು ನಾಳೆ ಮಾ.16ರಂದು ಸಂಜೆ 3 ಗಂಟೆಗೆ ಮಹತ್ವದ ಸುದ್ಧಿಗೋಷ್ಟಿ ಕರೆದಿದ್ದು ನಾಳೆಯೇ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.
ಕೇಂದ್ರ ಚುನಾವಣಾ ಆಯೋಗದ ಜಂಟೀ ನಿರ್ದೇಶಕರಾದ ಅನುಜ್ ಚಂದಕ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ಈ ಸುದ್ದಿಗೋಷ್ಟಿಗೆ ಎಲ್ಲಾ ಮಧ್ಯಮಗಳ ವರದಿಗಾರರು ಹಾಜರಾಗುವಂತೆ ಸೂಚಿಸಲಾಗಿದೆ.
ನಾಳಿನ ಮಹತ್ವದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ನಾಮಪತ್ರ ಹಿಂಪಡೆಯುವ ದಿನಾಂಕ ಸೇರಿದಂತೆ ಮತ ಎಣಿಕೆ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆಯಿದೆ. ಇದಲ್ಲದೇ ಸುದ್ದಿಗೋಷ್ಟಿ ಮುಗಿಯುತ್ತಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದ್ದು, ನಾಳೆಯಿಂದ ಚುನಾವಣಾ ರಣಕಣ ಮತ್ತಷ್ಟು ರಂಗುಪಡೆಯಲಿದೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.