Share this news

ನವದೆಹಲಿ:ದೇಶಕ್ಕೆ ದೇಶವೇ ಎದುರು ನೋಡುತ್ತಿದ್ದ ಲೋಕ ಸಮರಕ್ಕೆ ಕೊನೆಗೂ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ, ಚುನಾವಣಾ ದಿನಾಂಕ ಪ್ರಕಟಿಸಿದರು.
ದೇಶದಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಮತದಾನ ಎಪ್ರಿಲ್ 19ರಂದು ನಡೆದರೆ, 2ನೇ ಹಂತ ಏ.26, ಮೂರನೇ ಹಂತ ಮೇ 07, 4ನೇ ಮೇ 13, 5ನೇ ಹಂತ ಮೇ 20, 6ನೇ ಹಂತ ಮೇ 25 ಹಾಗೂ 7 ನೇ ಹಂತ ಜೂ.1ರಂದು ನಡೆಯಲಿದ್ದು ಜೂ.4ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 26 ರಂದು ರಾಜ್ಯದ ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.

ಮೇ 7 ರಂದು ಎರಡನೇ ಹಂತದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ.

ಇಂದಿನಿಂದಲೇ ದೇಶದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೇಶದಲ್ಲಿ ಒಟ್ಟು 97 ಕೋಟಿ ಮತದಾರರಿದ್ದು, ಈ ಪೈಕಿ 49.70 ಪುರುಷ ಮತದಾರರಿದ್ದು, 47.10 ಮಹಿಳಾ ಮತದಾರರಿದ್ದು,48 ಸಾವಿರ ತೃತೀಯ ಲಿಂಗಿ ಮತದಾರರು, ಮೊದಲ ಬಾರಿಗೆ 1.80 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.ಇದಲ್ಲದೇ 19.74 ಯುವ ಮತದದಾರರಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 10.05 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 55 ಲಕ್ಷ ಮತ ಯಂತ್ರಗಳನ್ನು ಬಳಸಲಾಗುತ್ತದೆ. ಚುನಾವಣಾ ಕರ್ತವ್ಯಕ್ಕೆ 1.50 ಕೋಟಿ ಸಿಬ್ಬಂದಿಗಳು, 2 ಕೋಟಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತದೆ ಎಂದು ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು
ಈ ಬಾರಿಯ ಚುನಾವಣೆಯಲ್ಲಿ ಚುನಾವಣಾ ಆಯೋಗ ಪ್ರಚಾರದ ಕುರಿತಂತೆ ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಿದೆ, ಯಾವುದೇ ಕಾರಣಕ್ಕೂ ದ್ವೇಷದ ಭಾಷಣ, ವೈಯುಕ್ತಿಕ ತೇಜೋವಧೆ, ಮತದಾರರನ್ನು ಪ್ರಚೋದಿಸುವಂತಿಲ್ಲ. ಮಾಧ್ಯಮಗಳು ಜವಾಬ್ದಾರಿ ಅರಿತು ಚುನಾವಣಾ ಪ್ರಕ್ರಿಯೆಗೆ ಸಹಕರಿಸುವಂತೆ ರಾಜೀವ್ ಕುಮಾರ್ ಮನವಿ ಮಾಡಿದರು

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *