ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.
ಕಾರ್ಕಳ: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆಯೋಗದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಿಂದಲೇ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾದ ಎಲ್ಲಾ ಬ್ಯಾನರ್ ಹಾಗೂ ಹೋರ್ಡಿಂಗ್ಸ್ ತೆರವುಗೊಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜೋಡುರಸ್ತೆಯ ದುರ್ಗಾಪರಮೇಶ್ವರಿ ವಿವಿಧೋದ್ದೇಶದ ಸಹಕಾರಿ ಸಂಘದ ನವೀಕೃತ ಕಚೇರಿ ಹಾಗೂ ಸಭಾಂಗಣ ಉದ್ಘಾಟನಾ ಕಾರ್ಯಕ್ರಮದ ಬೃಹತ್ ಬ್ಯಾನರ್ ಗಳನ್ನು ಅಳವಡಿಸಲಾಗಿತ್ತು. ಯಾವುದೇ ಅನುಮತಿ ಪಡೆಯದೇ ಅನಧಿಕೃತ ಹೋರ್ಡಿಂಗ್ಸ್ ಅಳವಡಿಸಿದ ಕುರಿತು ಸಾರ್ವಜನಿಕರು ಅಧಿಕಾರಿಗಳಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾತ್ರೋರಾತ್ರಿ ಎಲ್ಲಾ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ.
ಭಾನುವಾರ ಈ ಕಾರ್ಯಕ್ರಮ ನಡೆಯಲಿದ್ದು,ಬ್ಯಾನರ್ ತೆರವುಗೊಳಿಸದಂತೆ ಮನವಿ ಮಾಡಿದರೂ ಜಗ್ಗದ ಅಧಿಕಾರಿಗಳು ಒಂದು ದಿನ ಮುಂಚಿತವಾಗಿಯೇ ಈ ಬ್ಯಾನರ್ ತೆರವುಗೊಳಿಸುವ ಮೂಲಕ ಅಧಿಕಾರಿಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿರುವ ಕ್ರಮ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.