ಕಾರ್ಕಳ: ರಸ್ತೆಯ ಎಡಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ವೇಗವಾಗಿ ಬಂದ ಅಪರಿಚಿತ ಸ್ಕೂಟರ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಬಿದ್ದು ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್ಣು ಪೇಟೆಯ ಸರ್ಕಾರಿ ಕಾಲೇಜು ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳದಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ವೇಗವಾಗಿ ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಬೈದು ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈದು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಅಪಘಾತವಾಗುತ್ತಿದ್ದಂತೆಯೇ ಅಪರಿಚಿತ ಸವಾರ ಸ್ಕೂಟರ್ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.