ನವದೆಹಲಿ: ಗುರುವಾರ ರಾತ್ರೋರಾತ್ರಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜ್ಯಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವ ಬೆನ್ನಲ್ಲೇ ತನ್ನ ಬಂಧನದ ಕ್ರಮವನ್ನು ಪ್ರಶ್ನಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಆದರೆ ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ
ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಿಮಾಂಡ್ ಜತೆಗೆ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದರು.
ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಈ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ