ಬೆಂಗಳೂರು :ಅತ್ಯಂತ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ.
ಈ ಕುರಿತು ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಇಂದು ರಾತ್ರಿ ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇತ್ತ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು,ಇದರಿಂದಾಗಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಆಕಾಂಕ್ಷಿಯಾಗಿದ್ದ ಸುಮಲತಾ ಅವರಿಗೆ ಈ ನಿರ್ಧಾರದಿಂದ ತೀವೃ ನಿರಾಸೆಯಾಗಿದೆ. ಕೇವಲ ಮಂಡ್ಯ ಮಾತ್ರವಲ್ಲದೇ ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ನಾನು ಮಂಡ್ಯದ ಸೊಸೆ ,ಮಂಡ್ಯದ ಮಣ್ಣಿನಲ್ಲಿ ಮಣ್ಣಾಗುವೆ ಹೊರತು ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಇದೀಗ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಸುಮಲತಾ ಅವರ ಮುಂದಿನ ನಡೆ ಏನೆಂದು ಇನ್ನಷ್ಟೇ ತಿಳಿಯಬೇಕಿದೆ.


