Share this news

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಕಳೆದ ತಿಂಗಳಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ NIA ಅಧಿಕಾರಿಗಳು ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಜಮಿಲ್  ಶರೀಫ್​ ಎಂಬಾತನನ್ನು ಬಂಧಿಸಿದ್ದು NIA ವಿಚಾರಣೆ ವೇಳೆ ಆತ ಭಯಾನಕ ಮಾಹಿತಿ ಬಾಯಿ ಬಿಟ್ಟಿದ್ದಾನೆ.
ರಾಮೇಶ್ವರಂ ಸ್ಪೋಟಕ್ಕೂ ಮುನ್ನ ಬೆಂಗಳೂರು ಸಮೀಪವೇ ಬಾಂಬ್ ತಯಾರಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನುವ ಮಾಹಿತಿ ಬಯಲಾಗಿದೆ. ಬಾಂಬ್ ತಯಾರಿಕೆಯಲ್ಲಿ ಮುಜಾಮಿಲ್ ತನ್ನ ಸ್ನೇಹಿತರಾದ ಮತೀನ್, ಮುಸಾಫಿರ್ ನಿರಂತರ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.ಮುಜಾಮಿಲ್ ಮೂಲಕ ಬಾಂಬ್ ತಯಾರಿಸಲು ಬೇಕಾದ ಕಚ್ಚಾ ಸಾಮಗ್ರಿಗಳನ್ನು ತರಿಸಿಕೊಂಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ.
ಮುಜಾಮಿಲ್ ಷರೀಫ್ ಬಂಧನದ ಬಳಿಕ NIA ಟ್ವೀಟ್ ಮಾಡಿದ್ದು,ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್​ ಶರೀಫ್​ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಮಾರ್ಗದರ್ಶಕನಾಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ಮಾಹಿತಿ ನೀಡಿದೆ.

 

Leave a Reply

Your email address will not be published. Required fields are marked *