Share this news

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ., ಎನ್‌ಐಎ ಹಾಗೂ ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಿಸುವಂತೆ ಆಗ್ರಹಿಸಿ ಟಿಎಂಸಿ ಪಕ್ಷದ ನಾಯಕರು  ದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜೊತೆಗೆ ಟಿಎಂಸಿ ಸಂಸದರಾದ ಡೆರಿಕ್‌ ಒಬ್ರಿಯಾನ್‌ ಅವರ ನಿಯೋಗ ಆಯೋಗಕ್ಕೆ ಮನವಿ ಸಲ್ಲಿಸಿತು. ಆದರೆ ಪ್ರತಿಭಟನೆ ಜೋರಾಗುತ್ತಿದ್ದಂತೆ ಡೆರೆಕ್‌ ಸೇರಿದಂತೆ ಟಿಎಂಸಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತಿಹೆಚ್ಚು‌ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನದಲ್ಲಿ ಗುರುತಿಸಿಕೊಳ್ಳಲಿದೆ ಎಂದು ಕಾಂಗ್ರೆಸ್ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಇದಲ್ಲದೇ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣವು ಭಾರೀ ಸುದ್ದಿ ಮಾಡಿತ್ತು. ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು

 

 

 

 

 

Leave a Reply

Your email address will not be published. Required fields are marked *