Share this news

ಕೋಲಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದೆ. ಮಂಡ್ಯ ಬಳಿಕ, ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆಯಲ್ಲಿ ರಾಹುಲ್ ಗಾಂಧಿಯವರು ಎಡವಟ್ಟು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಎಂಬುದಾಗಿ ಸಂಭೋಧಿಸಿದಂತ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಬಳಿಯಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರಚಾರ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಭಾಗಿಯಾಗಿದ್ದಂತ ರಾಹುಲ್ ಗಾಂಧಿ ಅವರು, ನೆರೆದಿದ್ದಂತ ಕಾರ್ಯಕರ್ತರು, ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು.

ಭಾಷಣ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರು ಡಿಸಿಎಂ ಡಿಕೆ ಶಿವಕುಮಾರ್ ಎಂಬುದಾಗಿ ಹೇಳೋ ಬದರು, ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಎಂಬುದಾಗಿ ಸಂಭೋದಿಸಿ ಎಡವಟ್ಟು ಮಾಡಿದರು. ಇದನ್ನ ಗಮನಿಸಿದಂತ ಕಾಂಗ್ರೆಸ್ ನಾಯಕರು, ಅವರಿಗೆ ಮನವರಿಕೆ ಮಾಡಿ ಕೊಟ್ಟಾಗ ಮತ್ತೆ ತಮ್ಮ ತಪ್ಪನ್ನು ತಿದ್ದುಕೊಂಡು, ಡಿಸಿಎಂ ಡಿ.ಕೆ ಶಿವಕುಮಾರ್ ಎಂಬುದಾಗಿ ಹೇಳಿ ತಪ್ಪು ಸರಿಪಡಿಸಿದಂತ ಘಟನೆ ನಡೆದಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *