ಕಾರ್ಕಳ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಕುಲಕರ್ಣಿ ಎಂಬ ಯುವತಿಯನ್ನು ಮತಾಂಧ ವ್ಯಕ್ತಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ.
ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ, ತುಷ್ಟೀಕರಣ ನೀತಿಯಿಂದಾಗಿ ಮುಸ್ಲಿಂ ಸಮುದಾಯದ ಮತಾಂಧ ದುರುಳರು ಕಾನೂನಿನ ಭಯವೇ ಇಲ್ಲದೇ ರಾಜಾರೋಷವಾಗಿ ಕೊಲೆ, ದೊಂಬಿ, ನೈತಿಕ ಪೊಲೀಸ್ ಗಿರಿ, ದೇಶ ವಿರೋಧಿ ಘೋಷಣೆಗಳು ಮೇರೆ ಮೀರಿದೆ. ಮತಾಂಧ ಜಿಹಾದಿಗಳ ಈ ಹೀನ ಮನಸ್ಥಿತಿಗೆ ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳಿಯಲ್ಲಿ ನಡೆದ ಈ ಬರ್ಬರ ಹತ್ಯೆ ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೊಲೆಯಲ್ಲ ಬದಲಾಗಿ ಇದು ಜಿಹಾದಿಗಳ ಕೃತ್ಯವಾಗಿದೆ. ಮಾತ್ರವಲ್ಲದೇ ಈ ಕೃತ್ಯದ ಹಿಂದೆ ಇರುವುದು ಈ ದೇಶದ ಕಾನೂನನ್ನು ಧಿಕ್ಕರಿಸುವ ಮಾನಸಿಕತೆ ಅಡಗಿದೆ. ಎಂದು ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರನ್ನು ಸಮರ್ಥಿಸುವ ಮನಃಸ್ಥಿತಿ, ಸಹೋದ್ಯೋಗಿಗೆ ಮನೆಗೆ ಡ್ರಾಪ್ ಕೊಟ್ಟ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್ ಗಿರಿಯ ಮನಃಸ್ಥಿತಿ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಡುವ ವಿಧ್ವಂಸಕ ಮನಃಸ್ಥಿತಿ, ರಾಮನವಮಿಯ ದಿನ ಜೈ ಶ್ರೀರಾಮ್ ಎಂದವರ ಮೇಲೆ ಹಲ್ಲೆ ಮಾಡುವ ಮನಃಸ್ಥಿತಿ, ಈಗ ಹುಬ್ಬಳ್ಳಿಯಲ್ಲಿ ಹಾಡಹಗಲೆ ಹಿಂದು ಯುವತಿಯನ್ನು ಬರ್ಭರವಾಗಿ ಹತ್ಯೆ ಮಾಡುವ ಮನಃಸ್ಥಿತಿ ಎಲ್ಲವೂ ಒಂದೆ ! ಇದರ ಹಿಂದಿರುವ ಧೈರ್ಯ ಯಾವುದು ಗೊತ್ತೇ ? ಸಿದ್ದರಾಮಯ್ಯನವರೇ ಇದೇನಾ ನೀವು ಕಂಡ ಕನಸಿನ ಸರ್ವಜನಾಂಗದ ಶಾಂತಿಯ ತೋಟ? ಮಾತೆತ್ತಿದರೆ ಜಾತ್ಯಾತೀತತೆಯ ಮಾತುಗಳನ್ನಾಡುವ ನೀವು ರಾಜ್ಯದಲ್ಲಿ ಅಮಾಯಕ ಹಿಂದೂ ಯುವತಿಯ ಹತ್ಯೆ ವಿಚಾರದಲ್ಲಿ ಯಾಕೆ ಸುಮ್ಮನಿದ್ದೀರಿ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ










