ಕಾರ್ಕಳ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪಳ್ಳಿಯಲ್ಲಿ ಸಂಭವಿಸಿದೆ.
ಪಳ್ಳಿ ಗ್ರಾಮದ ಕುಟ್ಟಿ ಹಾಗೂ ಪ್ರೇಮಾ ದಂಪತಿ ಕಳೆದ ಶುಕ್ರವಾರ ಪಳ್ಳಿ ಕಡೆಯಿಂದ ಮುಂಡ್ಕೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ವೇಗವಾಗಿ ಬಂದು ನಿಯಂತ್ರಣತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕುಟ್ಟಿ ಹಾಗೂ ಪ್ರೇಮಾ ದಂಪತಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊAಡಿದೆ
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.