ಕಾರ್ಕಳ: ವಿಪರೀತ ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಕಾರ್ಕಳದ ರವಿ (40) ಮೃತಪಟ್ಟ ವ್ಯಕ್ತಿ. ರವಿ ಅವಿವಾಹಿತರಾಗಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದು ವಿಪರೀತ ಶರಾಬು ಕುಡಿಯುವ ಚಟವನ್ನು ಹೊಂದಿದ್ದರು.
ಸೋಮವಾರ ಮುಂಜಾನೆ ಮದ್ಯ ಸೇವನೆಯಿಂದ ಕುಸಿದು ಬಿದ್ದ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.