ಬೆಂಗಳೂರು: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ ಸ್ಥಾಪನೆಯಾದ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಕಳಪೆಯಾಗಿದೆ ಎಂಬ ಆರೋಪ ಮೇರೆಗೆ ರಾಜ್ಯ ಸರ್ಕಾರ ಕೊನೆಗೂ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ಆದೇಶ ಹೊರಡಿಸಿದೆ.
ಕಳೆದ ಒಂದು ವರ್ಷದಿಂದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳಪೆ ಕಾಮಗಾರಿ ನಡೆದಿದೆ ಎನ್ನುವ ಆರೋಪ ಪ್ರತ್ಯಾರೋಪಗಳು ಹಾಗೂ ತನಿಖೆಗೆ ಒತ್ತಾಯಿಸಿ ಹಲವು ಪ್ರತಿಭಟನೆಗಳು ನೆಡೆದಿತ್ತು.ಆದರೂ ಸರ್ಕಾರ ಮಾತ್ರ ಸಿಐಡಿ ತನಿಖೆಗೆ ಆದೇಶ ಮಾಡಿರಲಿಲ್ಲ.
ಇದೀಗ ಬರೋಬ್ಬರಿ ಒಂದು ವರ್ಷದ ಬಳಿಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಅಧಿಕೃತವಾಗಿ ಆದೇಶಿಸಿದೆ.