Share this news

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿತ್ತು. ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದರು.

ದೇವೇಗೌಡರ ಮನೆಯಲ್ಲಿ ರೇವಣ್ಣ ಅವರು ಇರಬಹುದು ಎಂದು ಶಂಕಿಸಿರುವ ಅಧಿಕಾರಿಗಳು ಮನೆಯ ಮುಂಬಾಗಿಲು ಹಾಗೂ ಹಿಂಬಾಗಿಲಿನಲ್ಲಿ ನಿಂತುಕೊಂಡಿದ್ದರು. ಇನ್ನು ರೇವಣ್ಣ ಮನೆಯಿಂದ ಹೊರಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ; ಪಿಎ ತೋಟದ ಮನೆಯಲ್ಲಿ ಪತ್ತೆ!

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಏಪ್ರಿಲ್ 29ರಂದು ರೇವಣ್ಣ ಅವರ ಸಂಬಂಧ ಸತೀಶ್ ಬಾಬು ಎಂಬುವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

 

 

 

 

                        

                          

Leave a Reply

Your email address will not be published. Required fields are marked *