ಕಾರ್ಕಳ: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರಿಣಿ ಶಿಕ್ಷಕಿಯೊಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಎಂಬಲ್ಲಿ ಸಂಭವಿಸಿದೆ.
ಕಾರ್ಕಳ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶಿಲ್ಪಾ,(27) ಎಂಬವರು ಗಾಯಗೊಂಡಿದ್ದಾರೆ.
ಶಿಲ್ಪಾ ಸೋಮವಾರ ಮಧ್ಯಾಹ್ನ ಕರ್ತವ್ಯ ಮುಗಿಸಿ ಅಯ್ಯಪ್ಪನಗರದ ದೇವಿಕೃಪಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಸಲುವಾಗಿ ಮಧ್ಯಾಹ್ನ ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಅಯ್ಯಪ್ಪನಗರದ ಸುಧಾಕರ ಶೆಟ್ಟಿ ಎಂಬವರ ಮನೆಯ ಬಳಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಶಿಕ್ಷಕಿ ಶಿಲ್ಪಾ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
