ನವದೆಹಲಿ: ಭಾರತವು ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳಬೇಕು,ಇದಲ್ಲದೇ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಬೇಕು ಇಲ್ಲವಾದರೆ ಭಾರತದ ಮೇಲೆ ಅಣು ಬಾಂಬ್ ದಾಳಿಯಾಗಬಹುದು ಎಂದು ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದು,ಚುನಾವಣಾ ಹೊತ್ತಲ್ಲೇ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಿದೆ.
ಭಾರತವು ತನ್ನ ಮಿಲಿಟರಿ ಬಲವನ್ನು ಹೆಚ್ಚಿಸಬಾರದು, ಪಾಕಿಸ್ತಾನದೊಂದಿಗೆ ಮೃದು ಧೋರಣೆ ತೋರದೇ ನೆರೆಯ ದೇಶವನ್ನು ಗೌರವಿಸದಿದ್ದರೆ,ಭಾರತ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಮಣಿಶಂಕರ್ ಅಯ್ಯರ್ ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪಾಕ್ ಬಳಿ ಪರಮಾಣು ಬಾಂಬ್ ಗಳಿವೆ. ಆದರೆ ಹುಚ್ಚನೊಬ್ಬ ಲಾಹೋರ್ ಮೇಲೆ ಬಾಂಬ್ ಹಾಕಲು ನಿರ್ಧರಿಸಿದರೆ, ವಿಕಿರಣವು ಅಮೃತಸರವನ್ನು ತಲುಪಲು 8 ಸೆಕೆಂಡುಗಳು ಬೇಕಾಗುವುದಿಲ್ಲ ಎಂದು ಅವರು ಭಾರತವನ್ನು ಎಚ್ಚರಿಸಿದ್ದಾರೆ.
ನಾವು ಅವರನ್ನು ಗೌರವಿಸಿದರೆ, ಅವರು ಶಾಂತಿಯುತವಾಗಿರುತ್ತಾರೆ. ಆದರೆ ನಾವು ಅವರನ್ನು ತಿರಸ್ಕರಿಸಿದರೆ, ಒಬ್ಬ ಹುಚ್ಚನು ಬಂದು ಭಾರತದ ಮೇಲೆ ಬಾಂಬ್ಗಳನ್ನು ಹಾಕಲು ನಿರ್ಧರಿಸಿದರೆ ಏನಾಗುತ್ತದೆ? ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ.
ಈ ಹೇಳಿಕೆಯ ಬೆನ್ನಲ್ಲೇ ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ






