ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಅವರ ಹೆಸರು ಕೂಡ ತಳಕು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ಪ್ರಜ್ವಲ್ ರೇವಣ್ಣ ವಿರುದ್ದದ ಅತ್ಯಾಚಾರ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಂತಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನವೀನ ಗೌಡ ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಪೆನ್ ಡ್ರೈವ್ ನನ್ನು ಶಾಸಕ ಮಂಜು ಅವರಿಗೆ ನಾನು ನೀಡಿದ್ದೇನೆ ಎಂದಿದ್ದಾನೆ. ಆರೋಪಿ ನವೀನ್ ಗೌಡ ಫೇಸ್ಬುಕ್ ಖಾತೆಯಿಂದ ಈ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಏಪ್ರಿಲ್ 20 ರಂದು ನನಗೆ ರಸ್ತೆಯಲ್ಲಿ ಪೆನ್ ಡ್ರೈವ್ ಸಿಕ್ಕಿದ್ದು, ಅರಕಲಗೂಡು ಶಾಸಕರಾದ ಎ ಮಂಜು ಅವರಿಗೆ 21 ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ ವೈರಲ್ ಹಿಂದೆ ಇರುವ ಮಹಾ ನಾಯಕ ಅರಕಲಗೂಡು ಶಾಸಕರು ಆಗಿರಬಹುದು ಎಂದು ಆರೋಪಿ ನವೀನ್ ಗೌಡ ಹಾಕಿರುವ ಪೋಸ್ಟ್ ಈಗ ವೈರಲ್ ಆಗುತ್ತಿದೆ.






