ಕಾರ್ಕಳ: ಪುರಸಭಾ ವ್ಯಾಪ್ತಿಯ 23 ವಾರ್ಡುಗಳಿಗೆ ಕುಡಿಯುವ ನೀರು ಪೂರೈಸುವ ಕಾರ್ಕಳದ ರಾಮ ಸಮುದ್ರ ಜಲಾಶಯದಿಂದ ಗುತ್ತಿಗೆದಾರ ಅಕ್ರಮ ಕಾಮಾರಿಗಳಿಗೆ ನೀರು ಬಳಸುತ್ತಿದ್ದು ಈ ಕುರಿತು ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದರೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಕಾರ್ಕಳ ಪುರಸಭಾ ಸದಸ್ಯ ಶುಭದ ರಾವ್ ಆರೋಪಿಸಿದ್ದಾರೆ.
ನಗರದಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಗಳು ಜನರಿಗೆ ಉಚಿತ ಕುಡಿಯುವ ನೀರು ಪೂರೈಸುತ್ತಿದ್ದಾರೆ. ಇಷ್ಟೆಲ್ಲಾ ನೀರಿನ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿಗಳು ಮಾತ್ರ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದು ಅಚ್ಚರಿ ಮೂಡಿಸಿದೆ ಎಂದು ಶುಭದ ರಾವ್ ಹೇಳಿದ್ದಾರೆ.