ಕಾರ್ಕಳ:ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪೇರಲ್ ಪಾದೆ ಎಂಬಲ್ಲಿ ನಡೆದಿದೆ.
ನೋಯಲ್ ಮಾರ್ಟಿಸ್ (46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕಳೆದ ಎರಡು ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಎನ್ನಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ