ಬೆಂಗಳೂರು: ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಇದೀಗ 1 ತಿಂಗಳ ಬಳಿಕ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ವಿದೇಶದಲ್ಲೇ ಕುಳಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.
ವಿಡಿಯೋದಲ್ಲಿ ಮಾತನಾಡಿದ ನಟ ಪ್ರಜ್ವಲ್ ರೇವಣ್ಣ ವಿದೇಶಿ ಪ್ರವಾಸ ಹೋಗೋದು ಮೊದಲೇ ನಿಗದಿಯಾಗಿತ್ತು, ಜೆಡಿಎಸ್ ಕಾರ್ಯರ್ತರಿಗೆ, ತಂದೆಗೆ, ತಾತನಿಗೆ ಕ್ಷಮೆ ಕೋರುತ್ತೇನೆ.
31 ಕ್ಕೆ ಎಸ್ ಐಟಿ ಮುಂದೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ವಿಡಿಯೋ ಮೂಲಕ ಅವರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಕೇಂದ್ರ ಸರ್ಕಾರದಿಂದ ನಡೆಯುತ್ತಿದ್ದು, ಈ ಬೆನ್ನಲ್ಲೇ ಪ್ರಜ್ವಲ್ ಗೆ ವಿದೇಶಾಂಗ ಸಚಿವಾಲಯವು ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡಬೇಕೆಂಬ ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆ ಕ್ರಮ ಕೈಗೊಂಡಿತ್ತು. ಕರ್ನಾಟಕ ಸರ್ಕಾರದಿಂದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವ ಬಗ್ಗೆ ಪತ್ರ ಬಂದಿದ್ದು, ಅದರಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಎಲ್ಲಾ ಪ್ರಕ್ರಿಯೆಗಳ ನಡುವೆ ಪ್ರಜ್ವಲ್ ವಿಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ.
ಅವರು ಮೆ31 ರೊಳಗೆ ಭಾರತಕ್ಕೆ ಮರಳುತ್ತಾರೆಯೇ ಎನ್ನುವುದು ಸಧ್ಯದ ಪ್ರಶ್ನೆಯಾಗಿದೆ