Share this news

ಕಾರ್ಕಳ: ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯು ಈ ವರ್ಷದಿಂದ ಕೊಡಲಾರಂಭಿಸಿರುವ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ ಡಾ. ನಾ. ಮೊಗಸಾಲೆಯವರ ‘ಭಾರತ ಕಥಾ’ ಕಾದಂಬರಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ. ಡಾ. ಸುಭಾಷ ಪಟ್ಟಾಜೆ ಮತ್ತು ಕುಮಾರಿ ಭವ್ಯ ಭಟ್ ಅವರು ತೀರ್ಪುಗಾರರಾಗಿದ್ದ ಈ ಪ್ರಶಸ್ತಿಯ ಆಯ್ಕೆಗೆ ಮೂವತ್ತಕ್ಕೂ ಅಧಿಕ ಕಾದಂಬರಿಗಳು ಬಂದಿದ್ದವು.

ಈ ಪ್ರಶಸ್ತಿಗೆ ಲೇಖಕರು, ಪ್ರಕಾಶಕರು ಮತ್ತು ಓದುಗರಿಂದ ಕಾದಂಬರಿಗಳನ್ನು ಆಹ್ವಾನಿಸಲಾಗಿತ್ತು. ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಓದುಗರಿಂದ ಕಾದಂಬರಿಗಳನ್ನು ಆಹ್ವಾನಿಸುವ ಮೂಲಕ ಸಾಹಿತ್ಯ ಗಂಗಾ ಸಂಸ್ಥೆಯು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಪ್ರಶಸ್ತಿಯ ಮತ್ತೊಂದು ವಿಶೇಷವೆಂದರೆ ‘ಭಾರತ ಕಥಾ’ ಕಾದಂಬರಿಯನ್ನು ಲೇಖಕರಾಗಲೀ, ಪ್ರಕಾಶಕರಾಗಲೀ ಕಳಿಸಿರಲಿಲ್ಲ, ಓದುಗರೇ ಕಳಿಸಿದ್ದರು. ಕನ್ನಡದ ಮುಖ್ಯ ಲೇಖಕಿಯರಲ್ಲೊಬ್ಬರಾದ ದಿ. ಸುನಂದಾ ಬೆಳಗಾಂವಕರ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಚೊಚ್ಚಲ ಪ್ರಶಸ್ತಿಗೆ ಕನ್ನಡದ ಮಹತ್ವದ ಲೇಖಕರಾದ ಡಾ. ನಾ. ಮೊಗಸಾಲೆಯವರ ‘ಭಾರತ ಕಥಾ’ ಆಯ್ಕೆಯಾಗಿದೆ. ಪ್ರಶಸ್ತಿ ವಿಜೇತರಾದ ಡಾ. ನಾ. ಮೊಗಸಾಲೆಯವರಿಗೆ ಸಾಹಿತ್ಯ ಗಂಗಾ ಸಂಸ್ಥೆಯ ಮುಖ್ಯಸ್ಥ ವಿಕಾಸ ಹೊಸಮನಿ, ಸಂಚಾಲಕ ಸುಭಾಷ ಪಟ್ಟಾಜೆ ಮತ್ತು ಪ್ರಾಯೋಜಕರಾದ ಸೀಮಾ ಕುಲಕರ್ಣಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಜೂನ್ 8 ರಂದು ಶನಿವಾರ ಕಾರ್ಕಳದ ಪ್ರಕಾಶ್‌ ಹೊಟೇಲಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಚಾಲಕರಾದ ಸುಭಾಷ್ ಪಟ್ಟಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *