Share this news

ಕಾರ್ಕಳ:ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ಕಸಬಾ ನಿವಾಸಿ ವೀಣಾ (62) ಇವರಿಗೆ 13 ವರ್ಷದ ಹಿಂದೆ ಬಿದ್ದು ತಲೆಗೆ ಗಾಯವಾಗಿತ್ತು. ಬಳಿಕ ತಲೆಗೆ ಶಸ್ತ್ರಚಿಕಿತ್ಸೆ ನಡೆಸಿದ ನಂತರ ವೀಣಾ ಅವರಿಗೆ ಮಾನಸಿಕ ಸಮಸ್ಯೆ ಪ್ರಾರಂಭವಾಗಿದ್ದು ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಲಾಗುತ್ತಿತ್ತು. ಇದೇ ವಿಚಾರದಲ್ಲಿ ಮನನೊಂದು ವೀಣಾ ಅವರು ಗುರುವಾರ ಸಂಜೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

  

 

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *