ಹೆಬ್ರಿ: ಆಯುಷ್ಯ ಮುಗಿದರೆ ಸಾವು ಯಾವ ಕ್ಷಣದಲ್ಲಿ ಯಾವ ರೂಪದಲ್ಲಿ ಬೇಕಾದರೂ ಬರಬಹುದು ಎನ್ನುವುದಕ್ಕೆಹೆಬ್ರಿ ತಾಲೂಕಿನ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ.
ವರಂಗ ಗ್ರಾಮದ ಮಾತಿಬೆಟ್ಟು ನಿವಾಸಿ ಶಂಕರ (62) ಎಂಬವರು ಶನಿವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ವಿಪರೀತ ಮಳೆ ಬರುತ್ತಿರುವ ಸಂದರ್ಭದಲ್ಲಿ ಅರುಣ್ ಎಂಬವರ ಗದ್ದೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ಒಣಗಿದ ಅಡಿಕೆ ಮರ ಶಂಕರ ಅವರ ತಲೆ ಹಾಗೂ ಎದೆಯ ಮೇಲೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











