Share this news

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯವರ ಕೊಲೆ ಪ್ರಕರಣದಲ್ಲಿ ಕನ್ನಡದ ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌ ಅವರನ್ನು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಸದ್ಯ ಮೈಸೂರಿನಿಂದ ಕಾಮಾಕ್ಷಿಪಾಳ್ಯಕ್ಕೆ ನಟ ದರ್ಶನ್‌ ಅವರನ್ನು ಕರೆತರಲಾಗುತ್ತಿದೆ.ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾದ ನಟ ದರ್ಶನ್‌ ಸೇರಿದಂತೆ ಒಟ್ಟು ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಟ ದರ್ಶನ್‌ ಸೂಚನೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿ ಪಾಳ್ಯಕ್ಕೆ ಕರೆಸಿಕೊಂಡು ನಟ ದರ್ಶನ್‌ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೋರಿಗೆ ಎಸೆಯಲಾಗಿದೆ ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಜೂನ್‌ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಮರುದಿನ ಮೃತದೇಹವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪವಿತ್ರ ಗೌಡಗೆ ಆಶ್ಲೀಲ ಮೇಸೆಜ್‌ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ

 

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *