ಬೆಂಗಳೂರು: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರಿಗೆ ಸ್ಥಳ ನಿಯುಕ್ತಿಗಾಗಿ ಕೌನ್ಸಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರು ಸೇರಿದಂತೆ ತತ್ಸಮಾನ ವೃಂದದ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಇದೀಗ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿಯನ್ನು ಪ್ರಕಟಿಸಿ ಆದೇಶಿಸಲಾಗಿದೆ.ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಬಿ.ಬಿ ಕಾವೇರಿ ಅವರು ಅಧಿಕೃತ ಜ್ಞಾಪನ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಇದ್ದ ಪ್ರಯುಕ್ತ ಕೌನ್ಸಿಲಿಂಗ್ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಆದ್ದರಿಂದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸುವ ಕುರಿತಂತೆ ಪ್ರಸ್ತುತ ವೇಳಾಪಟ್ಟಿಯನ್ನು ಪರಿಷ್ಕರಿಸಿ ಆದೇಶಿಸಿದ್ದಾರೆ.











