Share this news

ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ.

ರೇಖಾ (62ವ) ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರು ಕಳೆದ 6-7 ತಿಂಗಳಿನಿAದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಮಂಗಳೂರಿನ ತಾರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೂ ಖಾಯಿಲೆ ವಾಸಿಯಾಗಲಿಲ್ಲವೆಂದು ಮನನೊಂದಿದ್ದ ಅವರು ಬುಧವಾರ ಬೆಳಿಗ್ಗೆ ನಿಟ್ಟೆಯ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *