ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಂಗಳವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರದ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಸಂಸದ ಶ್ರೀ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು