Share this news

ಮೈಸೂರು: 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು ಆದರೆ ಕಳೆದ 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಇದರಿಂದ ಸಾಕಷ್ಟು ತೊಂದರೆಯಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2 ಸಾವಿರ ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ ನಮಗೆ 2 ತಿಂಗಳಿನಿಂದ ಹಣ ಬರುತ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.

ವಾರದೊಳಗೆ ಯಜಮಾನಿಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್

ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೇ, ಜೂನ್ ತಿಂಗಳ ಹಣ ಹಾಕಿದ್ದೇವೆ. ವಾರದೊಳಗೆ ಯಜಮಾನಿಯರ ಖಾತೆಗೆ ಹಣ ಕ್ರೆಡಿಟ್ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳವರೆಗೂ ಗೃಹಲಕ್ಷ್ಮಿ ಯೋಜನೆ ಇರಲಿದೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಇಲಾಖೆಯಿಂದ ಗೃಹಲಕ್ಷ್ಮಿ ಹಣ ಖಾತೆಗೆ ಹಾಕುವ ಕೆಲಸ ನಡೆಯುತ್ತಿದ್ದು, ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.

 

 

                        

                          

 

 

 

 

 

                        

                          

 

 

 

 

Leave a Reply

Your email address will not be published. Required fields are marked *