Share this news

ಕಾರ್ಕಳ : ತಾಲೂಕಿನ ಮಾಳ ಕೂಡಬೆಟ್ಟು ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024- 25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಾಲಕ ಶಿಕ್ಷಕ ಸಭೆಯು ಶಾಲೆಯ ಸಭಾಂಗಣದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ. ಶಶಿಧರ್ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಸಕ್ತ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು,ಶಾಲಾ ಯೋಜನೆಗಳ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಭಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಶಿಧರ್ ಭಟ್ ಕಳೆದ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಪ್ರಗತಿಗೆ ಕಾರಣವಾದ ಸಮಸ್ತ ಶಿಕ್ಷಕರು ಹಾಗೂ ಪಾಲಕರಿಗೆ ಧನ್ಯವಾದ ತಿಳಿಸಿದರು. ಈ ಶೈಕ್ಷಣಿಕ ವರ್ಷದಲ್ಲಿಯೂ ಕೂಡ ಇದೇ ರೀತಿಯ ಸಹಕಾರವನ್ನು ನೀಡುವಂತೆ ಕೋರಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಪ್ರಸಕ್ತ ವರ್ಷದಲ್ಲಿ ಹಮ್ಮಿಕೊಳ್ಳಲಾಗುವ ಶೈಕ್ಷಣಿಕ ಚಟುವಟಿಕೆಗಳನ್ನು ಸಭೆಯ ಮುಂದೆ ಮಂಡಿಸಿದರು.

ಶಾಲೆಯ ಹಿರಿಯ ಶಿಕ್ಷಕ ರಾಧಾಕೃಷ್ಣ ಜೋಶಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ ಧನ್ಯವಾದಗಳು ನೀಡಿದರು. ಸಭೆಯಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರು ಮತ್ತು ಮಕ್ಕಳ ಪಾಲಕರು ಹಾಜರಿದ್ದರು.

                        

                          

                        

                          

 

Leave a Reply

Your email address will not be published. Required fields are marked *