ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಶುಕ್ರವಾರ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಜು.6 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಹಾಗೂ ಸರ್ಕಾರಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಕಡಲು ಪ್ರಕ್ಷುಬ್ಧವಾಗಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ















