ಕಾರ್ಕಳ: ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಕಾಡಿಬೈಲು ಎಂಬಲ್ಲಿ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಡಿಬೈಲು ನಿವಾಸಿ ರತ್ನ (85) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ತಮ್ಮ ಮಗ ಸೊಸೆ ಮೊಮ್ಮಕ್ಕಳೊಂದಿಗೆ ಕಾಡಿಬೈಲು ನಲ್ಲಿ ವಾಸವಿದ್ದರು. ಜು.5 ರಂದು ರತ್ನ ಅವರ ಮಗ ದಯಾನಂದ ಅವರು ಉಡುಪಿಗೆ ಕೆಲಸಕ್ಕೆಂದು ಹೋಗಿ ಮನೆಗೆ ಹಿಂತಿರುಗಿದಾಗ ತಾಯಿ ಮನೆಯಲ್ಲಿ ಇರಲಿಲ್ಲ. ಕೂಡಲೇ ದಯಾನಂದ ಅವರು ಮನೆಯ ಸುತ್ತಮುತ್ತ ಹುಡುಕಾಡಿದಾಗ ರತ್ನ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥತೆ ಹಾಗೂ ಇತರ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಬೇಸತ್ತು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
