Share this news

ಕಾರ್ಕಳ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಕೃಷಿ ಉತ್ತೇಜನ ಅಭಿಯಾನ ಹೋ…. ಬೇಲೆ….. ಜುಲೈ 13 ರಂದು ಬೋಳ ಗ್ರಾಮದಲ್ಲಿ ಕಾರ್ಕಳ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಅವರ ಮನೆಯ ಗದ್ದೆಯಲ್ಲಿ ನಡೆಯಲಿದೆ.

ಗ್ರಾಮೀಣ ಪ್ರದೇಶದಲ್ಲಿ ಭತ್ತದ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಕ್ಷೇತ್ರದ ಶಾಸಕ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿಯ ಹಿರಿಯರಾದ ಬೋಳ ಪ್ರಭಾಕರ್ ಕಾಮತ್ ಹಾಗೂ ಹಿರಿಯರು, ನ್ಯಾಯವಾದಿ ಎಂ.ಕೆ ವಿಜಯಕುಮಾರ್, ಜಿಲ್ಲೆಯ ಹಾಗೂ ಮಂಡಲದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಲಿರುವರು.

ಅಂದು ಬೆಳಿಗ್ಗೆ 8.30ಕ್ಕೆ ಬೋಳ ಗ್ರಾಮಕ್ಕೆ ಶಾಸಕರ ವಿಕಾಸ ಕಚೇರಿಯಿಂದ ವಾಹನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಮಹಿಳಾ ಮೋರ್ಚಾದ ಸದಸ್ಯೆಯರು ಮತ್ತು ಶಕ್ತಿಕೇಂದ್ರ ಅಧ್ಯಕ್ಷರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚುವರಿ ವಾಹನದ ವ್ಯವಸ್ಥೆ ಬೇಕಾದವರು ಕೂಡಲೇ ಶಕ್ತಿ ಕೇಂದದ್ರ ಅಧ್ಯಕ್ಷರು ಅಥವಾ ಮಹಿಳಾ ಮೋರ್ಚಾ ಪದಾಧಿಕಾರಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿನಯ ಡಿ. ಬಂಗೇರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                        

                          

                        

                          

 

Leave a Reply

Your email address will not be published. Required fields are marked *