ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಕಾರ್ಕಳ ತಾಲೂಕು ಆಸ್ಪತ್ರೆಯ ಸಮುದಾಯ ಆರೋಗ್ಯಾಧಿಕಾರಿ ಹರಿಣಿಯವರು ಇತ್ತೀಚೆಗೆ ವ್ಯಾಪಕವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ, ಮೆದುಳು ಜ್ವರದ ಬಗ್ಗೆ ಮಾಹಿತಿ ನೀಡಿ, ರೋಗದ ಲಕ್ಷಣ , ಹರಡುವ ವಿಧಾನ, ತಡೆಗಟ್ಟುವ ಕ್ರಮಗಳ ಬಗ್ಗೆ ವಿವರಿಸಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಸುಹಾಸಿನಿ, ಶಿಕ್ಷಕಿಯರಾದ ಮಧುಶ್ರೀ, ಅಶ್ವಿನಿ, ಪೂಜಾ, ಶ್ರೇಯಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಪದವೀಧರ ಸಹ ಶಿಕ್ಷಕಿ ಪ್ರತಿಮಾ ದೇವದಾಸ್ ಸ್ವಾಗತಿಸಿ, ವಂದಿಸಿದರು.














