ಕಾರ್ಕಳ: ಕಾರ್ಕಳ ಟೈಗರ್ಸ್ ಹಾಗೂ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಪತ್ರಿಕಾ ಮಾಸಾಚರಣೆ ಹಾಗೂ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವು ಜು.13ರಂದು ಸಾಲ್ಮ,ರದ ಗುರುದೀಪ್ ಗಾರ್ಡನ್ಸ್ ನಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ ಮಾತನಾಡಿ, ಪತ್ರಿಕೆಗಳು ಸಮಾಜ ಕನ್ನಡಿಯಂತಿರಬೇಕು, ಸಮಾಜದಲ್ಲಿ ಕುಂದುಕೊರತೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ. ಪತ್ರಕರ್ತನಾದವನು ಪಕ್ಷಾತೀತನಾಗಿರಬೇಕು, ಸತ್ಯವಾದಿಯಾಗಿರಬೇಕು ಇದರ ಜತೆಗೆ ಆತನ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಮಾಜ್ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗವು ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಸರ್ಕಾರದ ಲೋಪದೋಷಗಳನ್ನು ಎತ್ತಿ ತೋರಿಸುವ ಮೂಲಕ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು ಎಂದರು. ಪತ್ರಕರ್ತರು ಹಾಗೂ ಪತ್ರಿಕೆಗಳು ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಹಾಗೂ ಸ್ಥಳೀಯ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗಬೇಕಿದೆ ಎಂದರು

ಬೋಳ ಪ್ರಶಾಂತ್ ಕಾಮತ್ ಕಾರ್ಯಕ್ರಮದ ಆದ್ಯಕ್ಷತೆ ವಹಿಸಿ ಮಾತನಾಡಿ, ದಿನದ 24 ಗಂಟೆಯೂ ಬಿಡುವಿಲ್ಲದೇ ಕೆಲಸ ನಿರ್ವಹಿಸುವ ಮೂಲಕ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ, ಸಮಾಜದ ಓರೆಕೋರೆಗಳನ್ನು ತಿದ್ದುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರ್ಕಳ ಪತ್ರಕರ್ತರ ಅಧ್ಯಕ್ಷ ಮೊಹಮ್ಮದ್ ಶರೀಫ್, ಮಾಧ್ಯಮಬಿಂಬ ಹಾಗೂ ಸ್ವಯಂಟೈಮ್ಸ್ ಸಂಪಾದಕ ವಸಂತ ಕುಮಾರ್ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಕುಂಟಾಡಿ ದಯಾನಂದ ಪೈ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿತ್ಯಾನಂದ ಪೈ, ರಾಮಚಂದ್ರ ನಾಯಕ್, ಪುರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಅವಿನಾಶ ಶೆಟ್ಟಿ, ಪ್ರದೀಪ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ಹರೀಶ್ ಆಚಾರ್ಯ ಸ್ವಾಗತಿಸಿ, ಪ್ರಕಾಶ್ ರಾವ್ ವಂದಿಸಿದರು.














