Share this news

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ಅನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.

ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಇದು ಮೊದಲ ಬಜೆಟ್ ಆಗಿದೆ. 2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಗಳು ಇದ್ದ ಹಿನ್ನೆಲೆಯಲ್ಲಿ ಹಿಂದಿನ ಮೋದಿ ಸರ್ಕಾರ ಕಳೆದ ಫೆಬ್ರವರಿ ತಿಂಗಳಲ್ಲಿ ಮಧ್ಯಂತರ ಬಜೆಟ್ ಮಂಡಿಸಿತ್ತು. ಯಾವುದೇ ಮಹತ್ವದ ಘೋಷಣೆ ಆಗಿರಲಿಲ್ಲ.
60 ವರ್ಷಗಳ ನಂತರ ಸರ್ಕಾರವು 3ನೇ ಬಾರಿಗೆ ಮರಳಿ ಬಂದು 3ನೇ ಅವಧಿಯ ಮೊದಲ ಬಜೆಟ್ ಅನ್ನು ಮಂಡಿಸುವ ಸೌಭಾಗ್ಯವನ್ನು ಪಡೆದಿರುವುದು ಹೆಮ್ಮೆಯ ವಿಷಯ. ಮಂಗಳವಾರದ ಕೇಂದ್ರ ಬಜೆಟ್ ಮುಂದಿನ 5 ವರ್ಷಗಳ ಪಯಣದ ದಿಕ್ಸೂಚಿಯಾಗಲಿದೆ ಮತ್ತು 2047ರಲ್ಲಿ “ವಿಕಸಿತ್ ಭಾರತ್” ಕನಸನ್ನು ನನಸಾಗಿಸಲು ಅಡಿಪಾಯ ಹಾಕುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೇಂದ್ರ ಬಜೆಟ್ ಭಾಷಣ ಮಂಡನೆ ಕೇಂದ್ರ ಸರ್ಕಾರ ನಿರ್ವಹಿಸುವ ಸಂಸದ್ ಟಿವಿ ಮತ್ತು ದೂರದರ್ಶನ ಟಿವಿ ವಾಹಿನಿಗಳಲ್ಲಿ ನೇರ ಪ್ರಸಾರ ಇರುತ್ತದೆ. ಈ ವಾಹಿನಿಗಳ ಯೂಟ್ಯೂಬ್ ಚಾನಲ್‌ಗಳಲ್ಲೂ ನೇರ ಪ್ರಸಾರ ಇರುತ್ತದೆ. ಇಂಡಿಯಾ ಬಜೆಟ್ ವೆಬ್‌ಸೈಟ್‌ನಲ್ಲೂ ಲೈವ್ ಸ್ಟ್ರೀಮ್ ಇರುತ್ತದೆ.

                        

                          

                        

                          

 

Leave a Reply

Your email address will not be published. Required fields are marked *