Share this news

ಮಣಿಪಾಲ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಜುಲೈ.26 ಮತ್ತು 27 ರಂದು ನಡೆದ 16ನೇ ರಾಜ್ಯಮಟ್ಟದ ಅಂತರ್ ಶಾಲಾ ಒಲಂಪಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ, 18ರ ವಯೋಮಾನದ ಬಾಲಕರ ವಿಭಾಗದಲ್ಲಿ 100 ಮೀ. ಹಾಗೂ 200 ಮೀ. ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.

ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷಿö್ಮ ದಂಪತಿಯ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

                        

                          

                        

                          

 

`

Leave a Reply

Your email address will not be published. Required fields are marked *