ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಬಾರದಿರುವುದಕ್ಕೆ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದರು. ಆದರೆ, ಇದೀಗ ಕಳೆದ ಎರಡು ತಿಂಗಳ ಹಣವನ್ನು ಒಮ್ಮೆಲೆ ಜಮೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಜನಾಂದೋಲನಾ ಸಮಾವೇಶದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ. ಇಂದಿನಿಂದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಖಾತೆಗೆ ಜಮಾ ಆಗಲಿದೆ . ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಘೋಷಿಸಿದ್ದಾರೆ.
ಕಳೆದ ಎರಡು ಮೂರು ತಿಂಗಳಿನಿAದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.














`
