ಕಾರ್ಕಳ:ಸಾರ್ವಜನಿಕ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಕಾರ್ಕಳ ಡಿವೈಎಸ್ಪಿ ಕಚೇರಿಗೆ ದೂರು ನೀಡಲಾಗಿದೆ.
ಮಾಧ್ಯಮಗಳಲ್ಲಿ ನವೀನ್ ನಾಯಕ್ ಪೊಲೀಸರ ಕುರಿತು ನಿಂದಿಸಿರುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯ ಮೇಲೆ ಸಾಮಾನ್ಯ ಜನತೆಗೆ ಇರುವ ಗೌರವಕ್ಕೆ ಧಕ್ಕೆಯನ್ನು ಉಂಟುಮಾಡುವ ಪ್ರಯತ್ನವನ್ನು ಮಾಡಿರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಈ ಕುರಿತು ತಕ್ಷಣವೇ ಅವರ ವಿರುದ್ದ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ ದೂರನ್ನು ನೀಡಲಾಯಿತು
ಈ ಸಂಧರ್ಭದಲ್ಲಿ ಕಾರ್ಕಳ ಪುರಸಭಾ ಮಾಜಿ ಅಧ್ಯಕ್ಷ ಸುಭೀತ್ ಎನ್ ಅರ್, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜಿತ್ ಸಿಟಿ,ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುಹಾಸ್ ಕಾವ ಯುವ ಕಾಂಗ್ರೆಸ್ ಮುಖಂಡರಾದ ಸೂರಜ್ ಶೆಟ್ಟಿ,ನೀಲೇಶ್ ಕಾರ್ಕಳ ಉಪಸ್ಥಿತರಿದ್ದರು.














`
