Share this news

ಮಂಡ್ಯಆ.07: ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ,ಇದು ಅವರ ಪಾಪ ವಿಮೋಚನಾ ಯಾತ್ರೆಯಾಗಿದೆ, ಭ್ರಷ್ಟಾಚಾರದ ಪಾಪಗಳಿಂದ ವಿಮೋಚನೆಗೊಳ್ಳಲು ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಅವರು ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ವಿಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ವಿರುದ್ಧ ಅಲ್ಲ. ಬದಲಾಗಿ ಸರ್ಕಾರದ ವಿರುದ್ಧ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆ ನಿಲ್ಲಿಸಿ ಸರ್ಕಾರ ಉರುಳಿಸುವುದು ಅವರ ಉದ್ದೇಶ. ಆದರೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಉರುಳಿಸುವುದು ಅವರ ಹಣೆಯಲ್ಲೇ ಬರೆದಿಲ್ಲ ಎಂದರು.
ಅಲ್ಲದೇ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳ ತನಿಖೆ ಕೂಡ ನಡೆಸಲಾಗುವುದು ಎಂದರು

.

                        

                          

                        

                          

 

`

Leave a Reply

Your email address will not be published. Required fields are marked *