ಕಾರ್ಕಳ: ಕೃಷಿ ಇಲಾಖೆ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಅರ್ಹ ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಭತ್ತದ ಬೆಳೆ ಸಂಬಂದಿಸಿದಂತೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ತಂತ್ರಾಂಶದಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿ.ಎಸ್.ಸಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು( ಮೊಬೈಲ್ ಸಂಖ್ಯೆ: 8277932505 ) ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
`